ಕಲಿಕೆಗಾಗಿ ಸಾಲ ರೂಪದಲ್ಲಿ ವಿದ್ಯಾರ್ಥಿ ವೇತನ
ಉಡುಪಿ, ಮೇ 25: ಜಿಲ್ಲೆಯ ಎಲ್ಲಾ ಪದವಿ ಕಾಲೇಜುಗಳಲ್ಲಿ 2017-18ನೇ ಸಾಲಿನಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಅವರ ವಾರ್ಷಿಕ ಆದಾಯ 2.5 ಲಕ್ಷ ರೂ.ಗಿಂತ ಕಡಿಮೆ ಇದ್ದಲ್ಲಿ ರಾಜೀವಗಾಂಧಿ ಸಾಲರೂಪದ ವಿದ್ಯಾರ್ಥಿ ವೇತನವನ್ನು ಸೂಚಿತ ಬ್ಯಾಂಕುಗಳಿಂದ ಪಡೆಯ ಬಹುದು.
ಸಾಲ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳ ಅಥವಾ ಪೋಷಕರು ತಾವು ಪ್ರವೇಶ ಪಡೆದ ಕಾಲೇಜಿನ ಪ್ರಾಂಶುಪಾಲರನ್ನು ಅಥವಾ ಸಂಯೋಜಕರನ್ನು ಭೇಟಿಮಾಡಿ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ. ಸಾಲ ಪಡೆಯಲು ಬಯಸುವ ವಿದ್ಯಾರ್ಥಿಗಳು ಬ್ಯಾಂಕ್ನವರು ನೀಡುವ ಅರ್ಜಿ ಗಳನ್ನು ಭರ್ತಿ ಮಾಡಿ ಲೀಡ್ ಡಿಸ್ಟ್ರಿಕ್ಟ್ ಮ್ಯಾನೇಜರ್ಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
Next Story