varthabharthi

ಮಾಹಿತಿ - ಮಾರ್ಗದರ್ಶನ

ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಧನ

ವಾರ್ತಾ ಭಾರತಿ : 6 Jul, 2017

ಚಾಮರಾಜನಗರ, ಜು. 6:  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಐಐಎಂ, ಐಐಟಿ ಮತ್ತು ಐಐಎಸ್ಸಿ ಮುಂತಾದ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಹಿಂದುಳಿದ ವರ್ಗಗಳ ಸಮುದಾಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುವ ಸಲುವಾಗಿ  ಅರ್ಜಿ ಆಹ್ವಾನಿಸಿದೆ.

ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆಗೆ ಜುಲೈ 29 ಕಡೆಯ ದಿನವಾಗಿದ್ದು ಹೆಚ್ಚಿನ ವಿವರಗಳಿಗೆ ಇಲಾಖೆ ವೆಬ್ ಸೈಟ್  www.backwardclasses.kar.nic.in ನೋಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

 

Comments (Click here to Expand)