varthabharthi

ಮಾಹಿತಿ - ಮಾರ್ಗದರ್ಶನ

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ವಾರ್ತಾ ಭಾರತಿ : 16 Jul, 2017

ಮಂಗಳೂರು, ಜು.16: ಮಾರ್ಚ್ ಮತ್ತು ಎಪ್ರಿಲ್ 2017ರಲ್ಲಿ ನಡೆದ ಎಸೆಸೆಲ್ಸಿ/ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಗಳಲ್ಲಿ ಶೇ.90 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಅರ್ಜಿ ಸಲ್ಲಿಸಲು ಕೊನೆಯ ದಿನ ಜು.31. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‌ಸೈಟ್‌ನ್ನು ವೀಕ್ಷಿಸಬಹುದು. ವಿದ್ಯಾರ್ಥಿಗಳನ್ನು ಮೆರಿಟ್ ಹಾಗೂ ಮೀಸಲಾತಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ: 080-65970004 ಎಂದು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಪ್ರಕಟನೆ ತಿಳಿಸಿದೆ.

 

Comments (Click here to Expand)