varthabharthi

ರಾಷ್ಟ್ರೀಯ

9 ಜನರಿಗೆ ಗಂಭೀರ ಗಾಯ

ಸ್ಕಿಡ್ ಆಗಿ ಕಣಿವೆಗೆ ಉರುಳಿದ ವಾಹನ: 4 ಮಂದಿ ಮೃತ್ಯು

ವಾರ್ತಾ ಭಾರತಿ : 11 Aug, 2017

ಜಮ್ಮು ಕಾಶ್ಮೀರ, ಆ.11: ವಾಹನವೊಂದು ಕಣಿವೆಗೆ ಬಿದ್ದ ಪರಿಣಾಮ ನಾಲ್ಕು ಮಂದಿ ಮೃತಪಟ್ಟು 9 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದೆ.

ದೋಡಾ ಪಟ್ಟಣದಿಂದ 22 ಕಿ.ಮೀ. ದೂರದಲ್ಲಿರುವ ಸುಗ್ವಾರಿ-ಚಿರಾಲ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ.

ಪುಲ್ ದೋಡಾದಿಂದ ಚಿರಾಲಾಗೆ ತೆರಳುತ್ತಿದ್ದ ವಾಹನದಲ್ಲಿ  13 ಮಂದಿ ಪ್ರಯಾಣಿಕರಿದ್ದರು. ವಾಹನವು ರಸ್ತೆಯಲ್ಲಿ ಸ್ಕಿಡ್ ಆಗಿ 150 ಅಡಿ ಆಳದ ಕಣಿವೆಗೆ ಬಿದ್ದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

“ಪೊಲೀಸರೊಂದಿಗೆ ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ತಲುಪಿ ವಾಹನದಲ್ಲಿ ಸಿಲುಕಿಕೊಂಡಿದ್ದವರನ್ನು ಹೊರಗೆಳೆದರು. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಗಾಯಾಳುಗಳಲ್ಲಿ 4 ಮಂದಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

 

Comments (Click here to Expand)