varthabharthi

ರಾಷ್ಟ್ರೀಯ

ಯೋಗಿ ಆದಿತ್ಯನಾಥ್ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ವಾರ್ತಾ ಭಾರತಿ : 12 Aug, 2017

ಹೊಸದಿಲ್ಲಿ: ಬಾಬಾ ರಾಘವ ದಾಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ ಇದುವರೆಗೆ 63 ಮಕ್ಕಳು ಸಾವನ್ನಪ್ಪಿದ್ದು, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಆರೋಗ್ಯ ಸಚಿವ ಸಿದ್ಧಾರ್ಥನಾಥ್ ಸಿಂಗ್ ಘಟನೆಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಆಗ್ರಹಿಸಿದೆ.

ಮಕ್ಕಳ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್‌ ವಕ್ತಾರ ಮನೀಶ್ ತಿವಾರಿ ಆಗ್ರಹಿಸಿದ್ದಾರೆ.

ತನಿಖೆಗೆ ಮುಖ್ಯಮಂತ್ರಿ ಆದಿತ್ಯನಾಥ್ ಆದೇಶ

ಬಾಬಾ ರಾಘವ ದಾಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ ಮಕ್ಕಳು ಸಾವಿಗೀಡಾದ ಪ್ರಕರಣವನ್ನು ಕೂಲಂಕುಷ ತನಿಖೆಗೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.

ಆಸ್ಪತ್ರೆಗೆ ಆಮ್ಲಜನಕ ಪೂರೈಕೆಯಲ್ಲಿ ಕೊರತೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಶನಿವಾರ ಕರೆಯಲಾದ ತುರ್ತು ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

 

Comments (Click here to Expand)