varthabharthi

ರಾಷ್ಟ್ರೀಯ

ಆಮ್ಲಜನಕದ ಕೊರತೆಯನ್ನು ನಮ್ಮ ಗಮನಕ್ಕೆ ತಂದಿಲ್ಲ: ಆರೋಗ್ಯ ಸಚಿವ

ವಾರ್ತಾ ಭಾರತಿ : 12 Aug, 2017

ಲಕ್ನೋ: ಜುಲೈ 9 ಅಥವಾ ಆಗಸ್ಟ್ 9ರಂದು ಆಮ್ಲಜನಕ ಕೊರತೆ ಇರುವುದನ್ನು ಆಸ್ಪತ್ರೆಯ ಅಧಿಕಾರಿಗಳು, ವೈದ್ಯರು ಮುಖ್ಯಮಂತ್ರಿ ಅವರ ಗಮನಕ್ಕೆ ತಂದಿಲ್ಲ ಎಂದು ಆರೋಗ್ಯ ಸಚಿವ ಸಿದ್ದಾರ್ಥನಾಥ ಸಿಂಗ್ ಹೇಳಿದ್ದಾರೆ. ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಅಶುತೋಷ್ ಟಂಡನ್ ಸರಿಯಾದ ವಿವರಣೆ ನೀಡಿಲ್ಲ. ಈ ಅಂಶವನ್ನು ಗಮನದಲ್ಲಿ ಇರಿಸಿಕೊಂಡು ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಹಾಗೂ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ. ಪ್ರಕರಣವನ್ನು ಮುಖ್ಯಮಂತ್ರಿ ತುಂಬಾ ಹತ್ತಿರದಿಂದ ಪರಿಶೀಲಿಸುತ್ತಿದ್ದಾರೆ. ಎಲ್ಲ ಆಯಾಮಗಳಿಂದ ತನಿಖೆ ನಡೆಸಿದ ಬಳಿಕ ನಾವು ಸೂಕ್ತವಾದ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು. 

 

Comments (Click here to Expand)