ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮನ
ಬೆಂಗಳೂರು, ಆ.16: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಬುಧವಾರ ಬೆಳಗ್ಗೆ ಇಂಡಿಗೋ ವಿಮಾನದಲ್ಲಿ ಕೆಎಐಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಆಗಮಿಸಿರುವ ರಾಹುಲ್ ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹಾಗೂ ರಾಜ್ಯ ಉಸ್ತುವಾರಿ ಕೆ.ಎಲ್. ವೇಣುಗೋಪಾಲ್ ವಿಮಾನನಿಲ್ದಾಣದಲ್ಲಿ ಬರಮಾಡಿಕೊಂಡರು.
ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಇಂದಿರಾ ಕ್ಯಾಂಟೀನ್ನ್ನು ರಾಹುಲ್ ಗಾಂಧಿ ಜಯನಗರದಲ್ಲಿ ಉದ್ಘಾಟಿಸಲಿದ್ದು, ಮೊದಲ ಹಂತದಲ್ಲಿ 101 ಕ್ಯಾಂಟೀನ್ಗಳು ಕಾರ್ಯಾಚರಿಸಲಿವೆ. ಅಕ್ಟೋಬರ್ಗೆ ಎಲ್ಲ 198 ವಾರ್ಡ್ಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭವಾಗಲಿದೆ. ಎಲ್ಲ 27 ವಿಧಾನಸಭಾ ಕ್ಷೇತ್ರದಲ್ಲಿ ತಲಾ 1 ಅಡುಗೆ ಮನೆ ನಿರ್ಮಿಸಲಾಗಿದೆ.
ಕ್ಯಾಂಟೀನ್ನಲ್ಲಿ 5 ರೂ.ಗೆ ತಿಂಡಿ, 10 ರೂ.ಗೆ ಊಟ ಲಭಿಸಲಿದೆ.
Next Story