varthabharthi

ಮಾಹಿತಿ - ಮಾರ್ಗದರ್ಶನ

ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ವಾರ್ತಾ ಭಾರತಿ : 27 Aug, 2017

ಬೆಂಗಳೂರು, ಆ.27: ಅಲ್ಪ ಸಂಖ್ಯಾತ ಸಮುದಾಯ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತ ನಿರ್ದೇಶನಾಲಯ ನೀಡುವ ಎನ್.ಎಸ್.ಪಿ. ಆಧಾರಿತ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.

ಪ್ರೀ ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕೆ ಹೊಸದಾಗಿ ಅರ್ಜಿ ಸಲ್ಲಿಸುವವರು ಸೆಪ್ಟಂಬರ್ 30ರವರೆಗೆ ಅವಕಾಶವಿದೆ. ಅದೇ ರೀತಿ ಅರ್ಜಿಯ ನವೀಕರಣ ಮಾಡುವವರಿಗೆ ಆಗಸ್ಟ್ 31 ಕೊನೆಯ ದಿನವಾಗಿದೆ.

ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕೆ ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಸೆಪ್ಟಂಬರ್ 30 ಕೊನೆಯ ದಿನವಾಗಿದ್ದರೆ, ಅರ್ಜಿಯ ನವೀಕರಣ ಮಾಡಲು ಆಗಸ್ಟ್ 31ರವರೆಗೆ ಅವಕಾಶವಿದೆ.

ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಹೊಸದಾಗಿ ಅರ್ಜಿ ಸಲ್ಲಿಸುವರಿಗೆ ಸೆಪ್ಟಂಬರ್ 30ರವರೆಗೆ ಅವಕಾಶವಿದೆ. ಅರ್ಜಿಯ ನವೀಕರಣ ಕ್ಕೆ ಆಗಸ್ಟ್ 31ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಅಲ್ಪಸಂಖ್ಯಾತ ನಿರ್ದೇಶನಾಲಯದ ನಿರ್ದೆಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

Comments (Click here to Expand)