varthabharthi

ಮಾಹಿತಿ - ಮಾರ್ಗದರ್ಶನ

ಆಯುಶ್, ಕೃಷಿ ವಿಜ್ಞಾನ ಮತ್ತು ವೆಟರಿನರಿ ಕೋರ್ಸುಗಳಿಗೆ ಸಿಇಟಿ ಆನ್ ಲೈನ್ ಆಯ್ಕೆ ಪ್ರಕ್ರಿಯೆ ಆರಂಭ

ವಾರ್ತಾ ಭಾರತಿ : 16 Sep, 2017

ಮಂಗಳೂರು, ಸೆ.16: ಆಯುಶ್ (ಆಯುರ್ವೇದ, ಹೋಮಿಯೋಪತಿ, ಯುನಾನಿ, ನ್ಯಾಚುರೋಪತಿ ಮತ್ತು ಯೋಗ), ಕೃಷಿ ವಿಜ್ಞಾನ ಹಾಗೂ ವೆಟರಿನರಿಯ ಬಾಕಿ ಉಳಿದಿರುವ ಸರಕಾರಿ ಕೋಟಾದ ಸೀಟುಗಳಿಗೆ ಸಿಇಟಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಆನ್ ಲೈನ್ ಮೂಲಕ ಆಯ್ಕೆ ದಾಖಲಿಸುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ.

ಆಯ್ಕೆ ದಾಖಲಿಸಲು ಸೆ.18 ಕೊನೆಯ ದಿನಾಂಕವಾಗಿದೆ. ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿ ಮತ್ತು ವಿವರಗಳಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ kea.kar.nic.in ನ್ನು ಸಂಪರ್ಕಿಸಬಹುದು ಎಂದು ಕೆರಿಯರ್ ಗೈಡೆನ್ಸ್ ಆ್ಯಂಡ್ ಇನ್ಫಾರ್ಮೇಶನ್ ಸೆಂಟರ್ ನ ಅಧ್ಯಕ್ಷ ಉಮರ್ ಯು.ಎಚ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

Comments (Click here to Expand)