varthabharthi

ಕರಾವಳಿ

ದಕ್ಷಿಣ ಕನ್ನಡಕ್ಕೆ ನೂತನ ಜಿಲ್ಲಾಧಿಕಾರಿ ನೇಮಕ

ವಾರ್ತಾ ಭಾರತಿ : 10 Oct, 2017

ಮಂಗಳೂರು, ಅ. 10: ದಕ್ಷಿಣ ಕನ್ನಡಕ್ಕೆ ನೂತನ ಜಿಲ್ಲಾಧಿಕಾರಿಯನ್ನಾಗಿ ಶಶಿಕಾಂತ್ ಸೆಂತಿಲ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಒಂದು ವರ್ಷ 2 ತಿಂಗಳು ಕಾರ್ಯ ನಿರ್ವಹಿಸಿದ ಪ್ರಸ್ತುತ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಜಗದೀಶ್ ಅವರು 2016 ಆಗಸ್ಟ್ 1ರಂದು ದ.ಕ. ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

ಶಶಿಕಾಂತ್ ಸೇಂತಿಲ್ ಅವರನ್ನು ಬೆಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕ ಹುದ್ದೆಯಿಂದ ದ.ಕ. ಜಿಲ್ಲೆಗೆ ವರ್ಗಾವಣೆ ಮಾಡಲಾಗಿದ್ದು, ಅಲ್ಲಿ ತೆರವಾದ ಸ್ಥಾನಕ್ಕೆ ಜಗದೀಶ್ ಅವರನ್ನು ನೇಮಕಗೊಳಿಸಲಾಗಿದೆ.

ಮೂಲತಃ ತಮಿಳುನಾಡಿನವರಾಗಿರುವ ಸಸಿಕಾಂತ ಸೇಂತಿಲ್ 2009ನೆ ಬ್ಯಾಚ್‌ನ ಐಎಎಸ್ ಅಧಿಕಾರಿ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕರಾಗುವುದಕ್ಕೂ ಮೊದಲು ಅವರು ರಾಯಚೂರು ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.

 

Comments (Click here to Expand)