varthabharthi

ನಿಧನ

ಬಾಬು ಶೆಟ್ಟಿ

ವಾರ್ತಾ ಭಾರತಿ : 11 Oct, 2017

ಬಂಟ್ವಾಳ, ಅ. 11: ತಾಲೂಕಿನ ಕಲ್ಲಡ್ಕ ಸಮೀಪದ ಏಳ್ತಿಮಾರು ನಿವಾಸಿ, ಬಾಳ್ತಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಿರಿಯ ಬಿಜೆಪಿ ಮುಖಂಡ ಬಾಬು ಶೆಟ್ಟಿ ಏಳ್ತಿಮಾರು (71) ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೊಗರ್ನಾಡು ಸಾವಿರ ಸೀಮೆ ಕಾಂಪ್ರಬೈಲು ಉಳ್ಳಾಲ್ತಿ ಅಜ್ವರ ದೈವಗಳ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ, ಕುದ್ರೆಬೆಟ್ಟು ಮಣಿಕಂಠ ಯುವಶಕ್ತಿ ಸಂಘದ ಗೌರವಾಧ್ಯಕ್ಷರಾಗಿ, ಜನಶಕ್ತಿ ಸೇವಾ ಟ್ರಸ್ಟ್‌ನ ಪ್ರಮುಖರಾಗಿ, ಬಾಳ್ತಿಲ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷರಾಗಿ, ಕಂಬಳ ಕೋಣದ ಮಾಲಕ ರಾಗಿ, ಸಂಘಟಕರಾಗಿ, ಪ್ರಗತಿಪರ ಕೃಷಿಕರಾಗಿ, ಕೊಡುಗೈ ದಾನಿಯಾಗಿ ಗುರುತಿಸಿಕೊಂಡಿದ್ದರು. ಮೃತರು ಪತ್ನಿಯನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)