ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ರಾಜೀನಾಮೆ
ಹೊಸದಿಲ್ಲಿ, ಅ.20: ಭಾರತದ ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.
ವೈಯಕ್ತಿಕ ಕಾರಣದಿಂದಾಗಿ ರಂಜಿತ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆಂದು ತಿಳಿದು ಬಂದಿದೆ.
ಸುಪ್ರೀಂ ಕೋರ್ಟ್ ನ ಹಿರಿಯ ವಕೀಲರಾಗಿರುವ ರಂಜಿತ್ ಕುಮಾರ್ 2014ರಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರಕಾರ ಕೇಂದ್ರದಲ್ಲಿ ಅಧಿಕಾರ ವಹಿಸಿಕೊಂಡ ಬೆನ್ನೆಲ್ಲೇ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡಿದ್ದರು.
Next Story