varthabharthi

ನಿಧನ

​ ಉದ್ಯಮಿ ಮಾರೂರು ಪದ್ಮನಾಭ ಫೈ ನಿಧನ

ವಾರ್ತಾ ಭಾರತಿ : 22 Oct, 2017

ಮಂಗಳೂರು, ಅ.22: ನಗರದ ಖ್ಯಾತ ಉದ್ಯಮಿಗಳಲ್ಲಿ ಒಬ್ಬರಾಗಿರುವ ಮಾರೂರು ಪದ್ಮನಾಭ ಪೈ ರವಿವಾರ ಮುಂಜಾನೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ನಿನ್ನೆ ತಡರಾತ್ರಿ 12:40ರ ಸುಮಾರಿಗೆ ಹೃದಯಾಘಾತಕ್ಕೆ ಒಳಗಾಗಿದ್ದ ಪದ್ಮನಾಭ ಪೈಯವರನ್ನು ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಗರದಲ್ಲಿ ವಾಹನಗಳ ಬಿಡಿಭಾಗಗಳ ಪ್ರಮುಖ ಮಾರಾಟ ಸಂಸ್ಥೆಯಾಗಿರುವ ಮಾರೂರು ಪದ್ಮನಾಭ ಪೈ ಆ್ಯಂಡ್ ಕೋ. ಸಂಸ್ಥೆಯ ಸ್ಥಾಪಕರಾಗಿದ್ದ ಪದ್ಮನಾಭ ಪೈಯವರು ದ.ಕ. ಅಟೋಮೊಬೈಲ್ ಆ್ಯಂಡ್ ಟಯರ್ ಡೀಲರ್ಸ್‌ ಅಸೋಸಿಯೇಶನ್‌ನ ಅಧ್ಯಕ್ಷರಾಗಿದ್ದರು. ಅಲ್ಲದೆ ಕೊಂಚಾಡಿಯ ಶ್ರೀ ಮಹಾಲಸ ನಾರಾಯಣಿ ದೇವಳ ಸಮಿತಿಯ ಅಧ್ಯಕ್ಷರಾಗಿದ್ದರು.

ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಮೃತರ ಅಂತಿಮ ದರ್ಶನಕ್ಕೆ ನಗರದ ಮಠದಕಣಿಯಲ್ಲಿರುವ ಪೈಯವರ ನಿವಾಸ ‘ಶಾಂತಿ’ಯಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಅಂತಿಮ ಸಂಸ್ಕಾರವು ಇಂದು ಮಧ್ಯಾಹ್ನ 12 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

 

Comments (Click here to Expand)