varthabharthi

ಮಾಹಿತಿ - ಮಾರ್ಗದರ್ಶನ

ದಾವಣಗೆರೆ : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಾರ್ತಾ ಭಾರತಿ : 23 Oct, 2017

ದಾವಣಗೆರೆ,ಅ.23:ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ  ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ದಾವಣಗೆರೆ, ಜಗಳೂರು, ಹರಿಹರ, ಹರಪನಹಳ್ಳಿ, ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 31 ಅಂಗನವಾಡಿ ಕಾರ್ಯಕರ್ತೆ ಹಾಗೂ 27 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಆನ್‍ಲೈನ್‍ನಲ್ಲಿ ಅರ್ಜಿ ಅಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಅ. 23 ರಿಂದ  ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನ. 16 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ http://davanagere.nic.in ಹಾಗೂ  ದೂರವಾಣಿ ಸಂಖ್ಯೆ :08192 -264056 ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)