varthabharthi

ಗಲ್ಫ್ ಸುದ್ದಿ

ನ.10: ಕೆಎಂಸಿಎ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ವಾರ್ತಾ ಭಾರತಿ : 29 Oct, 2017

ಜಯ್ ಸಾರಾಪುರೆ, ಅನಂತ್ ತೇಜಸ್ವಿ, ಬಸವ್‌ರಾಜ್ ಉಮಾರಾಣಿ, ಜೀವನ್‌ಸಾಬ್ ಬಿನ್ನಾಲ

ಕತರ್, ಅ.29: ದೋಹದಲ್ಲಿ ಕಾರ್ಯಾಚರಿಸುತ್ತಿರುವ ಸಾಮಾಜಿಕ-ಸಾಂಸ್ಕೃತಿಕ ಸಂಘಟನೆ ಕರ್ನಾಟಕ ಮುಸ್ಲಿಮ್ ಕಲ್ಚರಲ್ ಅಸೋಸಿಯೇಶನ್ (ಕೆಎಂಸಿಎ) ಆಶ್ರಯದಲ್ಲಿ ನ.10ರಂದು ಇಲ್ಲಿನ ಇಂಡಿಯನ್ ಕಲ್ಚರಲ್ ಸೆಂಟರ್‌ನ ಅಶೋಕ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.

ಅಂದು ಸಂಜೆ 5ಕ್ಕೆ ಆರಂಭಗೊಳ್ಳುವ ಕಾರ್ಯಕ್ರಮದಲ್ಲಿ ಇಂಡಿಯನ್ ಕಲ್ಚರಲ್ ಸೆಂಟರ್ ಅಧ್ಯಕ್ಷೆ ಮಿಲನ್ ಅರುಣ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು.

ಕರ್ನಾಟಕದ ಖ್ಯಾತ ಕಲಾವಿದರಾದ ಜಯ್ ಸಾರಾಪುರೆ, ಅನಂತ್ ತೇಜಸ್ವಿ, ಬಸವ್‌ರಾಜ್ ಉಮಾರಾಣಿ, ಜೀವನ್‌ಸಾಬ್ ಬಿನ್ನಾಲ ವೈವಿಧ್ಯಮಯ ಸಾಂಸ್ಕೃತಿಕ- ಮನೋರಂಜನಾ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ.

ಇದೇ ವೇಳೆ ಸಮಾಜಕ್ಕೆ ಹಾಗೂ ಮನುಕುಲಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಿದ ಎಲೆಮರೆಯ ಕಾಯಿಗಳಂತಿರುವ ಕೆಲವರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದು ಕೆಎಂಸಿಎ ಅಧ್ಯಕ್ಷ ಅಬ್ದುಲ್ಲಾ ಮೋನು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)