varthabharthi

ರಾಷ್ಟ್ರೀಯ

ಕೋರ್ಟ್ ನಲ್ಲೇ ಕೈದಿಯ ಗುಂಡಿಟ್ಟು ಹತ್ಯೆ

ವಾರ್ತಾ ಭಾರತಿ : 13 Nov, 2017

ಹೊಸದಿಲ್ಲಿ, ನ. 13: ಈಶಾನ್ಯ ದಿಲ್ಲಿಯ ರೋಹಿಣಿ ನ್ಯಾಯಾಲಯದ ಆವರಣದಲ್ಲಿ ವಿಚಾರಣಾಧೀನ ಕೈದಿಯನ್ನು ಗುಂಡಿಟ್ಟು ಹತ್ಯೆಗೈದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

ದಿಲ್ಲಿ ನ್ಯಾಯಾಲಯದಲ್ಲಿ ಕಳೆದ ಎರಡು ವರ್ಷಗಳಲ್ಲಿ ನಡೆಯುತ್ತಿರುವ ಎರಡನೇ ಘಟನೆ ಇದಾಗಿದೆ.ವಿಚಾರಣಾಧೀನ ಕೈದಿಯನ್ನು ನ್ಯಾಯಾಲಯ ದಿಂದ ಕರೆದೊಯ್ಯುತ್ತಿರುವಾಗ ಕ್ಯಾಂಟೀನ್ ಪ್ರದೇಶದ ಸಮೀಪದ ಕಾರಿಡರ್‌ನಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೈದಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)