varthabharthi

ರಾಷ್ಟ್ರೀಯ

ಜಾರಿ ನಿರ್ದೇಶನಾಲಯದ ಮುಂದೆ ಹಾಜರಾದ ತೇಜಸ್ವಿ ಯಾದವ್

ವಾರ್ತಾ ಭಾರತಿ : 13 Nov, 2017

ಹೊಸದಿಲ್ಲಿ, ನ. 13: ರೈಲ್ವೆ ಹೊಟೇಲುಗಳ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಪುತ್ರ ತೇಜಸ್ವಿ ಯಾದವ್ ಸೋಮವಾರ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 ಪೂರ್ವಾಹ್ನ 11 ಗಂಟೆಯ ಬಳಿಕ ಜಾರಿ ನಿರ್ದೇಶನಾಲಯದ ಕಚೇರಿಗೆ ಆಗಮಿಸಿದ ತೇಜಸ್ವಿ ಯಾದವ್ ಅವರ ಹೇಳಿಕೆಯನ್ನು ಪ್ರಕರಣದ ತನಿಖಾಧಿಕಾರಿಗಳು ದಾಖಲಿಸಿಕೊಂಡರು.

ಈ ಪ್ರಕರಣಕ್ಕೆ ಸಂಬಂಧಿಸಿ ತನಿಖಾ ಸಂಸ್ಥೆ ತೇಜಸ್ವಿ ಅವರನ್ನು ವಿಚಾರಣೆ ನಡೆಸುತ್ತಿರುವುದು ಎರಡನೆ ಬಾರಿ. ಈ ಹಿಂದೆ ಅಕ್ಟೋಬರ್ 10ರಂದು 9 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.

 

Comments (Click here to Expand)