varthabharthi

ಕರಾವಳಿ

ಮಂಗಳೂರು ನೆಹರೂ ಮೈದಾನಕ್ಕೆ 25 ಲಕ್ಷ ರೂ. ವೆಚ್ಚದಲ್ಲಿ ಪ್ರವೇಶ ದ್ವಾರ: ಮೇಯರ್ ಕವಿತಾ ಸನಿಲ್

ವಾರ್ತಾ ಭಾರತಿ : 14 Nov, 2017

ಮಂಗಳೂರು, ನ.14: ನಗರದ ನೆಹರೂ ಮೈದಾನಕ್ಕೆ 25 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಪ್ರವೇಶ ದ್ವಾರವನ್ನು ನಿರ್ಮಿಸಲಾಗುತ್ತಿದ್ದು, ಟೆಂಡರ್ ಕರೆಯಲಾಗಿದೆ ಎಂದು ಮೇಯರ್ ಕವಿತಾ ಸನಿಲ್ ತಿಳಿಸಿದ್ದಾರೆ.

ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಹುಟ್ಟುಹಬ್ಬವಾದ ಮಕ್ಕಳ ದಿನಾಚರಣೆ ಅಂಗವಾಗಿ ನಗರದ ನೆಹರೂ ಮೈದಾನದಲ್ಲಿರುವ ನೆಹರೂ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡುತ್ತಿದ್ದರು.

ಮೈದಾನಕ್ಕೆ ಸೂಕ್ತ ಭದ್ರತೆ ಹಾಗೂ ಅದರ ಸೌಂದರ್ಯ ವನ್ನು ಹೆಚ್ಚಿಸಲು ಮಂಗಳೂರು ಮಹಾನಗರ ಪಾಲಿಕೆ ಮುತುವರ್ಜಿ ವಹಿಸಲಿದೆ ಎಂದರು.

ಮನಪಾ ಮುಖ್ಯ ಸಚೇತಕ ಶಶಿಧರ ಹೆಗ್ಡೆ, ಸ್ಥಾಯಿ ಸಮಿತಿಯ ಅಧ್ಯಕ್ಷೆ ಸಬಿತಾ ಮಿಸ್ಕಿತ್ ಮೊದಲಾದವರು ಉಪಸ್ಥಿತರಿದ್ದರು. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)