varthabharthi

ಕರಾವಳಿ

​ನ.17: ಲೋಕಾಯುಕ್ತ ನ್ಯಾಯಮೂರ್ತಿಗಳಿಂದ ಸಾರ್ವಜನಿಕ ವಿಚಾರಣೆ

ವಾರ್ತಾ ಭಾರತಿ : 14 Nov, 2017

ಮಂಗಳೂರು, ನ.14: ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ನ.17ರಂದು ಬೆಳಗ್ಗೆ 10ಕ್ಕೆ ನಗರದ ಪುರಭವನದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆಯನ್ನು ನಡೆಸಲಿದ್ದಾರೆ.

 ಜಿಲ್ಲೆಯಲ್ಲಿ ಯಾರಿಗಾದರೂ ಸರಕಾರಿ ಅಧಿಕಾರಿಗಳಿಂದ ಕೆಲಸದಲ್ಲಿ ವಿಳಂಬ ಆಗಿದ್ದರೆ ಅಥವಾ ಅಧಿಕಾರಿಗಳು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ ಲೋಕಾಯುಕ್ತ ಸಂಸ್ಥೆಗೆ ದೂರನ್ನು ನ.16 ರೊಳಗೆ ನಗರದ ಉರ್ವಾಸ್ಟೋರ್‌ನಲ್ಲಿರುವ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಅಥವಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ.

ನ.17ರಂದು ಪುರಭವನದಲ್ಲಿಯೂ ಖುದ್ದಾಗಿ ಸಲ್ಲಿಸಬಹುದು. ಅನಾಮಧೇಯ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಪ್ರಕಟನೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)