varthabharthi

ಕರಾವಳಿ

ಬಸ್ ಢಿಕ್ಕಿ: ಬೈಕ್ ಸವಾರನಿಗೆ ಗಾಯ

ವಾರ್ತಾ ಭಾರತಿ : 14 Nov, 2017

ಪುತ್ತೂರು, ನ. 14: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕೊಂದರ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮಾಡ್ನೂರು ಗ್ರಾಮದ ಕಾವು ಎಂಬಲ್ಲಿ ಮಾಣಿ ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಸಂಭವಿಸಿದೆ.

ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಪರ್ಪುಂಜ ನಿವಾಸಿ ಪುರುಷೋತ್ತಮ ಗಾಯಗೊಂಡವರು. ಗಾಯಾಳುವನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುಳ್ಯ  ಆಸ್ಪತ್ರೆಯಲ್ಲಿ ದಾಖಲಾಗಿರುವ ತನ್ನ ಸಂಬಂಧಿಕರೊಬ್ಬರ ಆರೋಗ್ಯ ವಿಚಾರಿಸಿಕೊಂಡು ಬರಲೆಂದು ಪುರುಷೋತ್ತಮ ಅವರು ನೆರೆಯ ನಿವಾಸಿ ದುಗ್ಗಣ್ಣ ಗೌಡ ಎಂಬವರನ್ನು ತನ್ನ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಸುಳ್ಯ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಪುರುಷೋತ್ತಮ ಅವರು ಚಲಾಯಿಸಿಕೊಂಡು ಹೋಗುತ್ತಿದ್ದ ಬೈಕ್ ಮತ್ತು ಸುಳ್ಯ ದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನ ನಡುವೆ ಕಾವು ಸಮೀಪ ಢಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಪುರುಷೋತ್ತಮ ಅವರಿಗೆ ಗಂಭೀರ ಗಾಯಗಳಾಗಿದೆ. ಸಹ ಸವಾರ ದುಗ್ಗಣ್ಣ ಗೌಡ ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

 

Comments (Click here to Expand)