varthabharthi

ಕರಾವಳಿ

ಉಡುಪಿ: ನ.17ರಿಂದ ಚಲನಚಿತ್ರ ಸಪ್ತಾಹ

ವಾರ್ತಾ ಭಾರತಿ : 14 Nov, 2017

ಉಡುಪಿ, ನ.14: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ವತಿಯಿಂದ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನ ಚಿತ್ರಗಳ ಪ್ರದರ್ಶನದ ಅಂಗವಾಗಿ ‘ಚಲನಚಿತ್ರ ಸಪ್ತಾಹ’ವನ್ನು ನ.17ರಿಂದ 23ರವರೆಗೆ ಪ್ರತಿದಿನ ಬೆಳಗ್ಗೆ 10 ಕ್ಕೆ ನಗರದ ಡಯಾನ ಚಿತ್ರಮಂದಿರದಲ್ಲಿ ಏರ್ಪಡಿಸಲಾಗಿದೆ.

ಈ ಸಪ್ತಾಹದಲ್ಲಿ ರಾಜ್ಯ ಪ್ರಶಸ್ತಿ ವಿಜೇತ ಚಿತ್ರಗಳಾದ ಅಮರಾವತಿ ನ.17 ರಂದು, ಕಿರಿಕ್‌ಪಾರ್ಟಿ ನ.18, ರಾಮಾ ರಾಮಾ ರೇ ನ.19, ಮದಿಪು (ತುಳು) ನ.20ರಂದು ಪ್ರದರ್ಶನಗೊಳ್ಳಲಿವೆ. ನ.21ರಂದು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ಚಲನಚಿತ್ರ ಯೂಟರ್ನ್, ನ.22ರಂದು ರಾಜ್ಯ ಪ್ರಶಸ್ತಿ ವಿಜೇತ ಅಲ್ಲಮ, ನ.23ರಂದು ರಾಜ್ಯ ಪ್ರಶಸ್ತಿ ವಿಜೇತ ಮಾರಿಕೊಂಡವರು ಚಿತ್ರ ಪ್ರದರ್ಶನಗೊಳ್ಳಲಿವೆ.

ಚಿತ್ರ ಪ್ರದರ್ಶನಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)