varthabharthi

ರಾಷ್ಟ್ರೀಯ

ಜಮ್ಮಕಾಶ್ಮೀರ: ಗುಂಡಿನ ಚಕಮಕಿ; ಯೋಧ ಹುತಾತ್ಮ, ಉಗ್ರ ಬಲಿ

ವಾರ್ತಾ ಭಾರತಿ : 14 Nov, 2017

ಶ್ರೀನಗರ, ನ. 14: ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿರುವಾಗ ಜಮ್ಮ ಹಾಗೂ ಕಾಶ್ಮೀರದ ಕುಲ್ಗಾಂವ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ ಹಾಗೂ ಓರ್ವ ಉಗ್ರ ಹತನಾಗಿದ್ದಾನೆ.

ಕುಲ್ಗಾಂವ್ ಜಿಲ್ಲೆಯ ನೌಬಗ್ ಕುಂದ್‌ನಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಯೋಧ ಗಂಭೀರ ಗಾಯಗೊಂಡಿದ್ದ. ಆನಂತರ ಆತ ಮೃತಪಟ್ಟ ಎಂದು ಸೇನಾ ಮೂಲಗಳು ತಿಳಿಸಿವೆ.

ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸೇನಾ ಪಡೆ ಆ ಪ್ರದೇಶ ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸಿತು. ಈ ಸಂದರ್ಭ ಉಗ್ರರು ಗುಂಡು ಹಾರಿಸಿದರು. ಯೋಧರು ಪ್ರತಿದಾಳಿ ನಡೆಸಿದರು ಎಂದು ಪೊಲೀಸ್ ವಕ್ತಾರ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)