varthabharthi

ನಿಧನ

ಸುರೇಂದ್ರ ಕಾಮತ್

ವಾರ್ತಾ ಭಾರತಿ : 20 Nov, 2017

ಬಂಟ್ವಾಳ, ನ. 20: ಬಂಟ್ವಾಳದ ವೆಂಕಟರಮಣ ಸ್ವಾಮೀ ಕಾಲೇಜಿನಲ್ಲಿ ಸುಮಾರು 41 ವರ್ಷಗಳ ಕಾಲ ಪ್ರಥಮ ದರ್ಜೆ ಗುಮಾಸ್ತರಾಗಿ ಕರ್ತವ್ಯ ಸಲ್ಲಿಸಿ ನಿವೃತ್ತರಾಗಿದ್ದ ಕೆ. ಸುರೇಂದ್ರ ಕಾಮತ್ (65) ಅವರು ಹೃದಯಘಾತದಿಂದ ಮಂಗಳೂರಿನಲ್ಲಿ ನಿಧನರಾಗಿದ್ದಾರೆ.

ಕಾಲೇಜಿನ ಎಲ್ಲ ಶಿಕ್ಷಕರು, ಶಿಕ್ಷಕೇತರರು ಹಾಗೂ ವಿದ್ಯಾರ್ಥಿಗಳೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದ ಇವರು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಶಿಕ್ಷಕೇತರ ಸಂಘದ ಕಾರ್ಯದರ್ಶಿಯಾಗಿಯೂ ಅವರು ಸೇವೆ ಸಲ್ಲಿಸಿದ್ದರು.

ಮೃತರು ಪುತ್ರಿ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಅಗಲಿದ ಸುರೇಂದ್ರ ಅವರ ನೆನಪಿಗೆ ಕಾಲೇಜಿನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

 

Comments (Click here to Expand)