varthabharthi

ರಾಷ್ಟ್ರೀಯ

ತೇಜ್‌ಪಾಲ್ ಅತ್ಯಾಚಾರ ಪ್ರಕರಣ: ವಿಚಾರಣೆ ಆರಂಭಿಸುವಂತೆ ಸುಪ್ರೀಂ ಆದೇಶ

ವಾರ್ತಾ ಭಾರತಿ : 6 Dec, 2017

 ಹೊಸದಿಲ್ಲಿ, ಡಿ.6: ‘ತೆಹೆಲ್ಕಾ’ ಪತ್ರಿಕೆಯ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ವಿಚಾರಣೆ ಆರಂಭಿಸುವಂತೆ ಹಾಗೂ ಪ್ರಕರಣದ ಸಾಕ್ಷಿಗಳ ಹೇಳಿಕೆಯನ್ನು ಪರಿಶೀಲಿಸುವಂತೆ ಸುಪ್ರೀಂಕೋರ್ಟ್ ಗೋವಾ ನ್ಯಾಯಾಲಯಕ್ಕೆ ಆದೇಶ ನೀಡಿದೆ.

  ಅಲ್ಲದೆ ತನ್ನನ್ನು ಪ್ರಕರಣದಿಂದ ಖುಲಾಸೆಗೊಳಿಸುವಂತೆ ತೇಜ್‌ಪಾಲ್ ಸಲ್ಲಿಸಿದ್ದ ಅರ್ಜಿಯ ಬಗ್ಗೆ ತ್ವರಿತ ನಿರ್ಧಾರ ಕೈಗೊಳ್ಳುವಂತೆ ಬಾಂಬೆ ಹೈಕೋರ್ಟ್‌ಗೆ ಸೂಚಿಸಿದೆ. ಸೆಪ್ಟೆಂಬರ್ 28ರಂದು ಗೋವಾದ ಮಪುಸ ಕೋರ್ಟ್‌ನಲ್ಲಿ ತೇಜ್‌ಪಾಲ್ ವಿರುದ್ಧ ಅತ್ಯಾಚಾರ ಪ್ರಕರಣದಲ್ಲಿ ಆರೋಪಪಟ್ಟಿ ದಾಖಲಾಗಿತ್ತು.

2013ರ ನವೆಂಬರ್ 7ರಂದು ಗೋವಾದ ಪಂಚತಾರಾ ಹೋಟೆಲೊಂದರ ಲಿಫ್ಟ್‌ನಲ್ಲಿ ತೇಜ್‌ಪಾಲ್ ಕಿರಿಯ ಸಹೋದ್ಯೋಗಿಯ ಮೇಲೆ ಅತ್ಯಾಚಾರ ಎಸಗಿದ್ದರೆಂದು ಆರೋಪಿಸಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)