ಮೊದಲ ಏಕದಿನ ಪಂದ್ಯ:ಟಾಸ್ ಜಯಿಸಿದ ಶ್ರೀಲಂಕಾ ಫೀಲ್ಡಿಂಗ್ ಆಯ್ಕೆ
ಧರ್ಮಶಾಲಾ, ಡಿ.10: ಭಾರತ ವಿರುದ್ಧದ ಮೊದಲ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟಾಸ್ ಜಯಿಸಿದ ಪ್ರವಾಸಿ ಶ್ರೀಲಂಕಾ ತಂಡ ಫೀಲ್ಡಿಂಗ್ ಆಯ್ದುಕೊಂಡಿದೆ.
ಟೀಮ್ ಇಂಡಿಯಾ ತಂಡವನ್ನು ರೋಹಿತ್ ಶರ್ಮಾ ನಾಯಕರಾಗಿ ಮುನ್ನಡೆಸುತ್ತಿದ್ದಾರೆ. ಟೆಸ್ಟ್ ಸರಣಿಯನ್ನು 1-0 ಅಂತರದಲ್ಲಿ ವಶಪಡಿಸಿಕೊಂಡ ಭಾರತ ತಂಡ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಗೆಲ್ಲುವ ಕನಸು ಕಾಣುತ್ತಿದೆ.
Next Story