ಮಡಿಕೇರಿ : ಪೌರಕಾರ್ಮಿಕರಿಗೆ ನಿವೇಶನ ಒದಗಿಸಲು ಜಿಲ್ಲಾಧಿಕಾರಿ ಸೂಚನೆ
ಅನುಸೂಚಿತ ಜಾತಿಗಳ ದೌರ್ಜನ್ಯ ಸಮಿತಿ ಸಭೆ
ಮಡಿಕೇರಿ,ಡಿ.11 :ನಿವೇಶನ ರಹಿತ ಪೌರಕಾರ್ಮಿಕರಿಗೆ ನಿವೇಶನ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿಗಳ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಿವೇಶನ ರಹಿತರಿಗೆ ಹಕ್ಕುಪತ್ರ ನೀಡಬೇಕು. ಕಾಡಂಚಿನಲ್ಲಿ ವಾಸಿಸುವರಿಗೆ ಅರಣ್ಯ ಕಾಯ್ದೆಯಡಿ ಭೂಮಿ ಒದಗಿಸುವಂತೆ ಸೂಚನೆ ನೀಡಿದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಮಾಯದೇವಿ ಗಲಿಗಲಿ ಅವರು ಹಲವು ಮಾಹಿತಿ ನೀಡಿದರು.
Next Story