ಬೈಕ್ ಸ್ಕಿಡ್: ಮಹಿಳೆ ಮೃತ್ಯು
ಶಿವಮೊಗ್ಗ, ಡಿ. 12: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟು, ಅವರ ಪತಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ದೇವಂಗಿ ಸಮೀಪದ ಹೀಲಿಕೆರೆ ಗ್ರಾಮದಲ್ಲಿ ವರದಿಯಾಗಿದೆ.
ತೀರ್ಥಹಳ್ಳಿ ಪಟ್ಟಣದ ಗಾಂಧಿನಗರದ ವಾಣಿ (30) ಮೃತಪಟ್ಟವರೆಂದು ಗುರುತಿಸಲಾಗಿದೆ. ಪತಿ ನರೇಂದ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪತಿ ಚಲಾಯಿಸುತ್ತಿದ್ದ ಬೈಕ್ನಲ್ಲಿ ವಾಣಿಯವರು ತೆರಳುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ಬಿದ್ದಿದ್ದು, ಆಸ್ಪತ್ರೆಗೆ ಕರೆತರುವ ಮಾರ್ಗಮಧ್ಯೆ ವಾಣಿಯವರು ಮೃತಪಟ್ಟಿದ್ದಾರೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story