varthabharthi

ನಿಮ್ಮ ಅಂಕಣ

ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ಭಾಗ್ಯ

ವಾರ್ತಾ ಭಾರತಿ : 25 Dec, 2017
ಮಧುಸೂದನ್ ಕೆ ಆರ್, ದಾವಣಗೆರೆ.

ಮಾನ್ಯರೆ,

ರಾಜ್ಯ ಸರಕಾರವು ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ಕೊಡುತ್ತೇವೆ ಎಂದು ನಿರ್ಧಾರಕೈಗೊಂಡಿತ್ತು. ಆದರೆ ದಾವಣಗೆರೆ ವಿವಿಯಲ್ಲಿ ನಡೆದ ಘಟಿಕೋತ್ಸವ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿಯವರು ಮುಂದಿನ ವರ್ಷದಿಂದ ಎಲ್ಲಾ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ಹಾಗೂ ಉಚಿತ ಶಿಕ್ಷಣ ನೀಡುವ ಯೋಜನೆ ಜಾರಿಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ ಈಗಾಗಲೇ 36 ಸಾವಿರ ಎಸ್ಸಿ, ಎಸ್ಟಿ ಪದವಿ ವಿದ್ಯಾರ್ಥಿಗಳಿಗೆ ಏಸರ್‌ಕಂಪೆನಿಯ ಲ್ಯಾಪ್‌ಟಾಪ್ ವಿತರಣೆ ಟೆಂಡರ್‌ಕರೆಯಲಾಗಿದೆ ಎಂದು ತಿಳಿಸಿದ್ದಾರೆ. ಹಾಗೂ ಜನವರಿ 15 ರೊಳಗೆ ವಿತರಣೆ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ. ಸಾಮಾನ್ಯವಾಗಿ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಖರೀದಿಸಲು ಕಷ್ಟವಾಗುತ್ತದೆ. ಆದ್ದರಿಂದ ಎಲ್ಲಾ ಸಾಮಾನ್ಯ ವರ್ಗದ ಯುಜಿ ಮತ್ತು ಪಿಜಿಯ ವಿದ್ಯಾರ್ಥಿಗಳಿಗೂ ಮುಂದಿನ ವರ್ಷದಿಂದಲೇೆ ಲ್ಯಾಪ್‌ಟಾಪ್ ವಿತರಿಸಲಾಗುತ್ತದೆ ಎಂದು ಹೇಳಿರುವುದು ನಿಜಕ್ಕೂ ಸಂತೋಷದ ಸಂಗತಿ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

 

Comments (Click here to Expand)