varthabharthi

ನಿಧನ

ಕಾರ್ಕಡ ರಾಮಚಂದ್ರ ಉಡುಪ

ವಾರ್ತಾ ಭಾರತಿ : 26 Dec, 2017

ಕೋಟ, ಡಿ.26: ಶಿಕ್ಷಣ ತಜ್ಞ ಕೋಟ ಕಾರ್ಕಡ ರಾಮಚಂದ್ರ ಉಡುಪ (97) ಅಲ್ಪಕಾಲದ ಅಸೌಖ್ಯದಿಂದ ಇಂದು ಮಧ್ಯಾಹ್ನ ಸ್ವಗೃಹದಲ್ಲಿ ನಿಧನ ರಾದರು.

ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಇವರು ಕೋಟ ವಿವೇಕ ಪದವಿಪೂರ್ವ ಕಾಲೇಜಿ ನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು. ನಾಟಕಕಾರ, ಸಾಹಿತಿಯಾಗಿ ಜನಮನ್ನಣೆ ಗಳಿಸಿದ್ದರು. ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಇವರ ನಿಧನಕ್ಕೆ ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕೋಟ ತಟ್ಟು ಗ್ರಾಪಂ ಅಧ್ಯಕ್ಷ ಪ್ರಮೋದ್ ಹಂದೆ ಸಂತಾಪ ವ್ಯಕ್ತಪಡಿಸಿದ್ದಾರೆ. ಇವರ ಪಾರ್ಥಿವ ಶರೀರವನ್ನು ಮಣಿಪಾಲ ಕೆಎಂಸಿಗೆ ದಾನ ಮಾಡಲು ಮನೆಯವರು ನಿರ್ಧರಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)