varthabharthi

ಕ್ರೀಡೆ

ಮುಶ್ತಾಕ್ ಅಲಿ ಟ್ವೆಂಟಿ-20 ಟೂರ್ನಿ: ಕರ್ನಾಟಕಕ್ಕೆ ಭರ್ಜರಿ ಜಯ

ವಾರ್ತಾ ಭಾರತಿ : 9 Jan, 2018

ವಿಶಾಖಪಟ್ಟಣ, ಜ.8: ಮುಶ್ತಾಕ್ ಅಲಿ ದಕ್ಷಿಣ ವಲಯ ಟ್ವೆಂಟಿ-20 ಟೂರ್ನಿಯಲ್ಲಿ ಕರ್ನಾಟಕ ತಂಡ ಗೋವಾ ವಿರುದ್ಧ 49 ರನ್‌ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದೆ.

ಸೋಮವಾರ ಇಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಕರ್ನಾಟಕ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 172 ರನ್ ಗಳಿಸಿದೆ. ಮಾಯಾಂಕ್ ಅಗರವಾಲ್(55, 35 ಎಸೆತ, 8 ಬೌಂಡರಿ, 2 ಸಿಕ್ಸರ್) ಅರ್ಧಶತಕದ ಕೊಡುಗೆ ನೀಡಿದರು. ಸಮರ್ಥ್(28), ಸ್ಟುವರ್ಟ್ ಬಿನ್ನಿ(ಔಟಾಗದೆ 28) ಹಾಗೂ ಮನೀಶ್ ಪಾಂಡೆ(24) ಎರಡಂಕೆಯ ಸ್ಕೋರ್ ದಾಖಲಿಸಿದರು.

 ಗೆಲ್ಲಲು ಕಠಿಣ ಸವಾಲು ಪಡೆದ ಗೋವಾ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 123 ರನ್ ಗಳಿಸಲಷ್ಟೇ ಶಕ್ತವಾಯಿತು. ಕರ್ನಾಟಕದ ಪರ ಅಭಿಮನ್ಯು ಮಿಥುನ್(2-13) ಹಾಗೂ ಎಸ್.ಅರವಿಂದ್(2-22) ತಲಾ 2 ವಿಕೆಟ್ ಕಬಳಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)