varthabharthi

ಕರ್ನಾಟಕ

ಪಿಎಫ್‌ಐ ನಿಷೇಧಿಸುವ ಪ್ರಶ್ನೆಯೇ ಇಲ್ಲ: ವೇಣುಗೋಪಾಲ್

ವಾರ್ತಾ ಭಾರತಿ : 11 Jan, 2018

ವಿಜಯಪುರ, ಜ.11: ರಾಜ್ಯದಲ್ಲಿ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ.

 ಕರಾವಳಿ ಭಾಗದ ಹಿಂಸಾಚಾರದಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಕೈವಾಡವಿದೆ. ಕರಾವಳಿಯಲ್ಲಿ ಅಪರಾಧಿ ಕೃತ್ಯಗಳಿಗೆ ಬಿಜೆಪಿ ಪ್ರಚೋದಿಸುತ್ತಿದೆ. ಬಿಜೆಪಿ ಮೊದಲು ಕ್ರಿಮಿನಲ್ ರಾಜಕೀಯದಿಂದ ಹೊರಬರಲಿ ಎಂದು ವೇಣುಗೋಪಾಲ್ ಹೇಳಿದ್ದಾರೆ.

ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ರಾಜ್ಯ ಬಿಜೆಪಿ ಮುಖಂಡರು ಪಿಎಫ್‌ಐ ಸಂಘಟನೆ ನಿಷೇಧಿಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಬುಧವಾರ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ಪಿಎಫ್‌ಐ ಸಂಘಟನೆಯ ವಿರುದ್ಧ ಆರೋಪಗಳು ಸಾಬೀತುಪಡಿಸುವ ಯಾವುದೇ ದಾಖಲೆ ಇನ್ನೂ ಲಭ್ಯವಾಗಿಲ್ಲ. ಆ ಸಂಘಟನೆಯ ನಿಷೇಧಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡುವುದಿಲ್ಲ ಎಂದು ಹೇಳಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)