varthabharthi

ರಾಷ್ಟ್ರೀಯ

ಸುಪ್ರೀಂ ಕೋರ್ಟ್ ನ ಆಡಳಿತ ವ್ಯವಸ್ಥೆಯ ಬಗ್ಗೆ ನ್ಯಾಯಮೂರ್ತಿಗಳ ಅಸಮಾಧಾನ

ನಾವು ಮೂಗು ತೂರಿಸುವುದಿಲ್ಲ : ಕೇಂದ್ರ ಸರಕಾರ

ವಾರ್ತಾ ಭಾರತಿ : 12 Jan, 2018

ಹೊಸದಿಲ್ಲಿ, ಜ.12: ನಾವು ಮೂಗು ತೂರಿಸಲು ಇಷ್ಟಪಡುವುದಿಲ್ಲ. ಇದು ನ್ಯಾಯಾಂಗ ವ್ಯವಸ್ಥೆಯ ಆಂತರಿಕ ವಿಚಾರವಾಗಿದೆ ಎಂದು ಕೇಂದ್ರ ಸರಕಾರ ಹೇಳಿಕೆ ನೀಡಿದೆ.

ಹೊಸದಿಲ್ಲಿಯಲ್ಲಿ  ಸುಪ್ರೀಂ ಕೋರ್ಟ್ ನ ನಾಲ್ವರು ನ್ಯಾಯಮೂರ್ತಿಗಳು ಸುದ್ದಿಗೋಷ್ಠಿ ನಡೆಸಿ ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್ ನ  ಆಡಳಿತ ವ್ಯವಸ್ಥೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಕೇಂದ್ರ ಸರಕಾರದಿಂದ  ಈ ಹೇಳಿಕೆ ಹೊರಬಿದ್ದಿದೆ.

ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳು ನಡೆಸಿದ ಪತ್ರಿಕಾಗೋಷ್ಠಿಯ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)