varthabharthi

ಸಿನಿಮಾ

ರಾಜರಥ: ಟ್ರೇಲರ್ ದಾಖಲೆ

ವಾರ್ತಾ ಭಾರತಿ : 12 Jan, 2018

ಸ್ಯಾಂಡಲ್‌ವುಡ್‌ನಲ್ಲಿ ಹೊಸತನದ ಗಾಳಿ ಬೀಸಿದ ರಂಗಿತರಂಗ ತಂಡದ ರಾಜರಥದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಭಾರೀ ಸಂಚಲನ ಸೃಷ್ಟಿಸಿದೆ. ಯೂಟ್ಯೂಬ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಂಡ ರಾಜರಥದ ಟ್ರೇಲರನ್ನು ಈತನಕ ಬರೋಬ್ಬರಿ 20 ಲಕ್ಷ ಮಂದಿ ವೀಕ್ಷಿಸಿದ್ದಾರಂತೆ. ಕನ್ನಡ ಚಿತ್ರರಂಗದ ಮಟ್ಟಿಗೆ ಇದೊಂದು ದಾಖಲೆ ಎಂದು ಸ್ಯಾಂಡಲ್‌ವುಡ್ ಮಂದಿ ಹೇಳುತ್ತಿದ್ದಾರೆ.

ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಏಕಕಾಲದಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರಕ್ಕೆ ನಿರೂಪ್ ಭಂಡಾರಿ ನಾಯಕ. ಖ್ಯಾತ ತಮಿಳು ನಟ ಆರ್ಯ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುವ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಅಂದಹಾಗೆ ಕನ್ನಡದ ರಾಜರಥದಲ್ಲಿ ಪುನೀತ್ ರಾಜ್‌ಕುಮಾರ್ ಹಾಗೂ ತೆಲುಗಿನ ರಾಜರಥದಲ್ಲಿ ರಾಣಾ ದುಗುಬಾಟಿ ವಿಶೇಷ ಪಾತ್ರವೊಂದರಲ್ಲಿ ಅಭಿನಯಿಸಿದ್ದಾರೆಂದು ನಿರ್ದೇಶಕ ಅನೂಪ್ ಭಂಡಾರಿ ತಿಳಿಸಿದ್ದಾರೆ. ಆದಾಗ್ಯೂ ಅದ್ಯಾವ ಪಾತ್ರವೆಂಬ ಬಗ್ಗೆ ಅವರಿನ್ನೂ ಗುಟ್ಟು ಬಿಟ್ಟುಕೊಟ್ಟಿಲ್ಲ. ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಈ ಚಿತ್ರಕ್ಕೆ ವಿಲಿಯಂ ಡೇವಿಡ್ ಕ್ಯಾಮರಾ ಹಿಡಿದಿದ್ದಾರೆ. ಎಲ್ಲ ಸರಿಹೋದಲ್ಲಿ ರಾಜರಥ ಜನವರಿ 25ರಂದು ತೆರೆಕಾಣಲಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)