varthabharthi

ರಾಷ್ಟ್ರೀಯ

ನ್ಯಾ. ಲೋಯಾ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆ ಅಗತ್ಯ : ರಾಹುಲ್ ಗಾಂಧಿ

ವಾರ್ತಾ ಭಾರತಿ : 12 Jan, 2018

ಹೊಸದಿಲ್ಲಿ, ಜ.12: ನಿಗೂಢವಾಗಿ ಸಾವನ್ನಪ್ಪಿರುವ ನ್ಯಾಯಾಧೀಶ ಲೋಯಾ ಅವರ ಸಾವಿನ ಕುರಿತು ಸುಪ್ರೀಂಕೋರ್ಟ್‌ನ ನಾಲ್ವರು ನ್ಯಾಯಾಧೀಶರು ಪ್ರಸ್ತಾವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣದ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಉನ್ನತ ಮಟ್ಟದ ತನಿಖೆಯ ಅಗತ್ಯವಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜನತೆ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ನಂಬಿಕೆ ಇರಿಸಿಕೊಂಡಿದ್ದಾರೆ. ಈ ನಂಬಿಕೆಯನ್ನು ಉಳಿಸಿಕೊಳ್ಳಬೇಕಿದೆ ಎಂದರು. ಸುಪ್ರೀಂಕೋರ್ಟ್‌ನ ನಾಲ್ವರು ನ್ಯಾಯಾಧೀಶರು ಮಹತ್ವದ ವಿಷಯವನ್ನು ಪ್ರಸ್ತಾವಿಸಿದ್ದಾರೆ.ಅವರು ವ್ಯಕ್ತಪಡಿಸಿರುವ ಕಳವಳದ ಬಗ್ಗೆ ಗಂಭೀರವಾಗಿ ಚಿಂತಿಸಬೇಕು .ನ್ಯಾಯಾಧೀಶರಿಗೆ ಪ್ರಕರಣಗಳನ್ನು ನಿಯೋಜಿಸುವಾಗ ಸಂಪ್ರದಾಯವನ್ನು ಪಾಲಿಸಬೇಕು . ಆಯ್ದು ನಿಯೋಜಿಸುವ ಕ್ರಮ ಕೊನೆಗೊಳ್ಳಬೇಕು ಎಂದು ರಾಹುಲ್ ಹೇಳಿದರು.

ನ್ಯಾ. ಲೋಯಾ ಸಾವಿನ ಪ್ರಕರಣವನ್ನು ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯಾಧೀಶರು ಹಾಗೂ ಸುಪ್ರೀಂಕೋರ್ಟ್‌ನ ನಿರ್ದೇಶನದಡಿ ಕಾರ್ಯ ನಿರ್ವಹಿಸುವ ವಿಶೇಷ ತನಿಖಾ ತಂಡ(ಎಸ್‌ಐಟಿ) ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸುತ್ತಿದೆ.

 

Comments (Click here to Expand)