varthabharthi

ಕರಾವಳಿ

ಉಡುಪಿ ವಕೀಲರ ಖಂಡನೆ

ವಾರ್ತಾ ಭಾರತಿ : 12 Jan, 2018
Varthabharathi

ಉಡುಪಿ, ಜ.12: ಕಾರ್ಕಳದಲ್ಲಿ ವಕೀಲರ ಮೇಲೆ ನಡೆದ ಕೊಲೆ ಯತ್ನವನ್ನು ಉಡುಪಿ ವಕೀಲರ ಸಂಘ ತೀವ್ರವಾಗಿ ಖಂಡಿಸಿದೆ.

ಈ ಪ್ರಕರಣದ ಕುರಿತು ಖಂಡನಾ ಸಭೆ ಶುಕ್ರವಾರ ಉಡುಪಿ ವಕೀಲರ ಸಂಘದ ಅಧ್ಯಕ್ಷ ಎಚ್.ರತ್ನಾಕರ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಕಳದಲ್ಲಿ ವಕೀಲರ ಮೇಲೆ ನಡೆಸಿರುವ ಕೊಲೆ ಯತ್ನ ನಡೆಸಿದ ಆರೋಪಿಗಳ ವಿರುದ್ಧ ಕೂಡಲೇ ಕಾನೂನು ಕ್ರಮ ಜರಗಿಸಬೇಕೆಂದು ಸಭೆಯಲ್ಲಿ ಒತ್ತಾಯಿಸಲಾಯಿತು.

ಉಡುಪಿ ವಕೀಲರ ಸಂಘದ ಕಾರ್ಯದರ್ಶಿ ಸಂತೋಷ್ ಹೆಬ್ಬಾರ್ ಸೇರಿದಂತೆ ಹಿರಿಯ-ಕಿರಿಯ ವಕೀಲರು ಸಭೆಯಲ್ಲಿ ಭಾಗವಹಿಸಿದ್ದರು.

 

Comments (Click here to Expand)