varthabharthi

ರಾಷ್ಟ್ರೀಯ

ರಾಜಸ್ಥಾನ , ಗುಜರಾತ್ ನಲ್ಲಿ ಬೆಂಕಿ ದುರಂತ; 8 ಬಲಿ

ವಾರ್ತಾ ಭಾರತಿ : 13 Jan, 2018

ಜೈಪುರ, ಜ.13: ರಾಜಸ್ಥಾನ  ಮತ್ತು ಗುಜರಾತ್ ನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಗ್ನಿ ದುರಂತ ಪ್ರಕರಣಗಳಲ್ಲಿ ಒಟ್ಟು 8 ಮಂದಿ ಮೃತಪಟ್ಟಿದ್ದಾರೆ.

ರಾಜಸ್ಥಾನದ ವಿದ್ಯಾಧರ್ ನಗರದ ಸೆಕ್ಟರ್ 9ರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಐವರು ಬಲಿಯಾಗಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗುಜರಾತ್ ನ ರಾಜ್ಕೋಟ್ ನಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣದಲ್ಲಿ ಬೆಂಕಿಯ ಕೆನ್ನಾಲಿಗೆಗೆ  ಮೂವರು ಬಾಲಕಿಯರು ಸಜೀವ ದಹನಗೊಂಡಿದ್ದಾರೆ. ಬೆಂಕಿಯನ್ನು ನಿಯಂತ್ರಣ ತರುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜ್ ಕೋಟ್ ಜಿಲ್ಲೆಯ ಪ್ನಾಂಸ್ಲಾ ಗ್ರಾಮದಲ್ಲಿ ಶ್ರೀವೇದಿಕ್ ಮಿಷನ್ ಟ್ರಸ್ಟ್ ಆಯೋಜಿಸಿದ್ದ  ರಾಷ್ಟ್ರಕಥಾ ಶಿಬಿರದಲ್ಲಿ ಕಳೆದ ರಾತ್ರಿ ಅಗ್ನಿ ಅವಘಡ ಸಂಭವಿಸಿ, ಶಿಬಿರದಲ್ಲಿ ಪಾಲ್ಗೊಂಡಿದ್ದ ಯುವತಿಯರ  ಪೈಕಿ ಮೂವರು ಯುವತಿಯರು  ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
 ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)