varthabharthi

ಕರಾವಳಿ

ಇಲ್ಯಾಸ್ ಹತ್ಯೆಯ ತನಿಖೆಗೆ ಪೊಲೀಸರ 3 ತಂಡಗಳ ರಚನೆ

ವಾರ್ತಾ ಭಾರತಿ : 13 Jan, 2018

ಮಂಗಳೂರು , ಜ.13: ಟಾರ್ಗೆಟ್ ಗ್ಯಾಂಗ್ ನ ಲೀಡರ್  ರೌಡಿಶೀಟರ್ ಇಲ್ಯಾಸ್ ಹತ್ಯೆಯ ಪ್ರಕರಣದ ಆರೋಪಿಗಳಿಗಾಗಿ ಪೊಲೀಸರ ಶೋಧ ಮುಂದುವರಿದಿದ್ದು, ಆರೋಪಿಗಳ ಪತ್ತೆಗೆ ಪೊಲೀಸರ ಮೂರು ತಂಡಗಳನ್ನು ರಚಿಸಲಾಗಿದೆ.

ಆರೋಪಿಗಳ  ತನಿಖೆಗೆ  ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಅವರು ಮೂರು ತಂಡಗಳನ್ನು ರಚಿಸಿ ಅವರಿಗೆ ಜವಾಬ್ದಾರಿಯನ್ನು ವಹಿಸಿಕೊಟ್ಟಿದ್ದಾರೆ. 

ಮಂಗಳೂರಿನ ಜೆಪ್ಪುವಿನ ಮನೆಗೆ ನುಗ್ಗಿದ ದುಷ್ಕರ್ಮಿಗಳು ಇಲ್ಯಾಸ್ ಗೆ ಚಾಕುವಿನಿಂದ ಹಿರಿದು ಗಂಭೀರ ಗಾಯಗೊಳಿಸಿ ಪರಾರಿಯಾಗಿದ್ದರು. ಗಂಭೀರ ಗಾಯಗೊಂಡ  ಇಲ್ಯಾಸ್ ನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರ ಗಾಯಗೊಂಡ ಇಲಿಯಾಸ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದನು.

ಫರಂಗಿಪೇಟೆಯಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಇಲ್ಯಾಸ್ ಇತ್ತೀಚೆಗಷ್ಟೇ ಜೈಲಿನಿಂದ ಜಾಮೀನು ಮೂಲಕ ಹೊರಬಂದಿದ್ದನು. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)