varthabharthi

ಬೆಂಗಳೂರು

ಬಿಜೆಪಿ- ಸಂಘಪರಿವಾರ ಉಗ್ರವಾದಿಗಳೆಂಬ ಹೇಳಿಕೆಗೆ ಖಂಡನೆ

ಬೆಂಗಳೂರು: ಬಿಜೆಪಿ ವತಿಯಿಂದ ಪ್ರತಿಭಟನೆ; ಬಂಧನ, ಬಿಡುಗಡೆ

ವಾರ್ತಾ ಭಾರತಿ : 13 Jan, 2018

ಬೆಂಗಳೂರು, ಜ. 13:  ಬಿಜೆಪಿ ಬೆಂಗಳೂರು ವತಿಯಿಂದ ಬಿಜೆಪಿ ಮತ್ತು ಆರ್.ಎಸ್.ಎಸ್ ಸಂಘಟನೆಯನ್ನು ಉಗ್ರಗಾಮಿಗಳು ಎಂದು ಹೇಳಿಕೆ ನೀಡಿರುವ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಶನಿವಾರ ಪ್ರತಿಭಟನೆ ನಡೆಯಿತು.

ಇಂದು ಬೆಳಗ್ಗೆ 11 ಘಂಟೆಗೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ರಸ್ತೆ ತಡೆ ಮತ್ತು ಜೈಲ್ ಭರೋ ಹಮ್ಮಿಕೊಂಡ ಕಾರಣ ಬಿಜೆಪಿ ನಾಯಕರುಗಳನ್ನು ಬಂಧಿಸಿದ ಪೊಲೀಸರು ನಂತರ ಬಿಡುಗಡೆಗೊಳಿಸಿದರು. 

ಬಿಜೆಪಿಯ ರಾಜ್ಯ ನಾಯಕರುಗಳು, ಸಂಸದರು, ಶಾಸಕರು, ಬಿಬಿಎಂಪಿ ಸದಸ್ಯರು, ಬೆಂಗಳೂರು ನಗರ ಮತ್ತು ಜಿಲ್ಲೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)