varthabharthi

ಕರ್ನಾಟಕ

ಸೊರಬ: ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಲ್ಯಾಪ್‍ಟಾಪ್ ವಿತರಣೆ

ವಾರ್ತಾ ಭಾರತಿ : 13 Jan, 2018
Varthabharathi

ಸೊರಬ, ಜ. 13: ಪ.ಜಾತಿ/ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಿಸುತ್ತಿರುವ ಸರ್ಕಾರದ ಕ್ರಮ ಉತ್ತಮ ಬೆಳವಣಿಗೆಯಾಗಿದೆ ಎಂದು ಶಾಸಕ ಮಧು ಬಂಗಾರಪ್ಪ ತಿಳಿಸಿದರು. ಶನಿವಾರ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಲ್ಯಾಪ್‍ಟಾಪ್ ವಿತರಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಸರ್ಕಾರ ನೀಡುತ್ತಿರುವ ಸೌಲಭ್ಯಗಳು ಆರ್ಥಿಕವಾಗಿ ಹಿಂದುಳಿದವರಿಗೆ ಸಾಕಷ್ಟು ಸಹಕಾರಿಯಾಗಲಿದೆ. ಸರ್ಕಾರದ ಸವಲತ್ತುಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಸಾರ್ವಜನಿಕ ಹಣದಲ್ಲಿ ಸರ್ಕಾರ ವಿತರಿಸುತ್ತಿರುವ ಸವಲತ್ತುಗಳಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ತಮ್ಮ ಫೋಟೋ ಹಾಕಿಸಿ ಪ್ರಚಾರ ಗಿಟ್ಟಿಸಿಕೊಳ್ಳುವುದು ಸೂಕ್ತವಲ್ಲ.  ಇತರೆ ಸಮುದಾಯಗಳಲ್ಲೂ ಸಹ ಆರ್ಥಿಕವಾಗಿ ಹಿಂದುಳಿದ ಸಾಕಷ್ಟು ವಿದ್ಯಾರ್ಥಿಗಳಿದ್ದು, ಅಂತಹ ವಿದ್ಯಾರ್ಥಿಗಳಿಗೂ ಸರ್ಕಾರ ಉಚಿತ ಲ್ಯಾಪ್‍ಟಾಪ್‍ಗಳನ್ನು ವಿತರಿಸುವಂತಾಗಬೇಕು. ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಆರ್ಥಿಕವಾಗಿ ಹಿಂದುಳಿದ ಎಲ್ಲಾ ಬಡ ಮಕ್ಕಳಿಗೂ ಲ್ಯಾಪ್‍ಟಾಪ್‍ಗಳನ್ನು ವಿತರಿಸಲಾಗುವುದೆಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಿ.ಎಸ್. ರವಿಶಂಕರ್, ಜಿಪಂ ಸದಸ್ಯರಾದ ವೀರೇಶ್ ಕೊಟಗಿ, ಶಿವಲಿಂಗೇಗೌಡ, ತಾರಾ ಶಿವಾನಂದ್, ಉಪನ್ಯಾಸಕರಾದ ಜಾವಿದ್ ಇಕ್ಬಾಲ್, ಹೆಚ್. ಜಯಪ್ಪ. ಜಿ. ಗುರುಮೂರ್ತಿ, ಜಿ. ಜಯಣ್ಣ, ಜಿ. ಶೇಖರಪ್ಪ ಮತ್ತಿತರರಿದ್ದರು.

 

Comments (Click here to Expand)