varthabharthi

ರಾಷ್ಟ್ರೀಯ

ಬಿಕ್ಕಟ್ಟು ನಿವಾರಣೆಯಾಗಲಿದೆ: ಅಟಾರ್ನಿ ಜನರಲ್

ವಾರ್ತಾ ಭಾರತಿ : 13 Jan, 2018
Varthabharathi

ಹೊಸದಿಲ್ಲಿ, ಜ.13: ಸುಪ್ರೀಂಕೋರ್ಟ್‌ನ ನಾಲ್ವರು ನ್ಯಾಯಾಧೀಶರು ಪತ್ರಿಕಾಗೋಷ್ಟಿಯಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ ಬಳಿಕ ಉಂಟಾಗಿರುವ ಬಿಕ್ಕಟ್ಟು ನಿವಾರಣೆಯಾಗಲಿದೆ ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಎಲ್ಲವೂ ಸುಸೂತ್ರವಾಗಿ ಬಗೆಹರಿಯಲಿ ಎಂದು ನಿರೀಕ್ಷಿಸೋಣ. ಎಲ್ಲ ಸಮಸ್ಯೆಗಳೂ ಬಗೆಹರಿಯಲಿದೆ ಎಂಬ ವಿಶ್ವಾಸ ನನಗಿದೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ. ನ್ಯಾಯಾಧೀಶರ ‘ಬಂಡಾಯ’ದ ಕುರಿತು ಶುಕ್ರವಾರ ಪ್ರತಿಕ್ರಿಯಿಸಿದ್ದ ವೇಣುಗೋಪಾಲ್, ನ್ಯಾಯಾಧೀಶರು ಘನತೆವೆತ್ತ ವ್ಯಕ್ತಿಗಳಾಗಿದ್ದು ತಮ್ಮೊಳಗಿನ ಭಿನ್ನಾಭಿಪ್ರಾಯಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲಿದ್ದಾರೆ ಎಂದರು.

ಈ ಮಧ್ಯೆ, ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿ ನೃಪೇಂದ್ರ ಮಿಶ್ರ ಶನಿವಾರ ಮುಖ್ಯನ್ಯಾಯಾಧೀಶರ ನಿವಾಸಕ್ಕೆ ತೆರಳಿದ್ದರು. ಆದರೆ ಗೇಟ್‌ನ ಬಳಿ ಕಾರಿನಿಂದ ಇಳಿಯದೆ ಕೆಲಹೊತ್ತು ಕಾದ ಬಳಿಕ ಅವರು ನಿವಾಸದ ಒಳಹೋಗದೆ ವಾಪಾಸಾಗಿದ್ದಾರೆ ಎಂದು ವರದಿಯಾಗಿದೆ.

 

Comments (Click here to Expand)