varthabharthi

ಕರಾವಳಿ

ತೆಂಕನಿಡಿಯೂರು: ಉಚಿತ ಲ್ಯಾಪ್‌ಟಾಪ್ ವಿತರಣೆ

ವಾರ್ತಾ ಭಾರತಿ : 13 Jan, 2018

ಉಡುಪಿ, ಜ.13: ರಾಜ್ಯ ಸರಕಾರದ ಒಟ್ಟು ಆದಾಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣ ಅವರಿಗೆ ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳುವುದು ಸರಕಾರದ ಉದ್ದೇಶವಾಗಿದೆ.ಇದರ ಒಂದು ಭಾಗವಾಗಿ ಪ.ಜಾತಿ ಮತ್ತು ಪ.ಪಂಗಡ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡಲಾಗುತ್ತಿದೆ. ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳುವಂತೆ ರಾಜ್ಯ ಮೀನುಗಾರಿಕೆ, ಯುವಜನಸಬಲೀಕರಣ ಹಾಗೂ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.

 ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಿಂದ ಇಲ್ಲಿ ನಡೆದ ಕಾಲೇಜು ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಉಡುಪಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪದವಿ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಿ ಅವರು ಮಾತನಾಡುತಿದ್ದರು.
    
  ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆ ಅಧ್ಯಕ್ಷೆಮೀನಾಕ್ಷಿ ಮಾಧವ ಬನ್ನಂಜೆ, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿಪಂ ಸದಸ್ಯ ಜನಾರ್ಧನ ತೋನ್ಸೆ ಕಲ್ಯಾಣಪುರ, ತಾಪಂ ಸದಸ್ಯ ಶರತ್‌ಕುಮಾರ್, ತಾಪಂ ಸದಸ್ಯರು ಧನಂಜಯ ಕುಂದರ್, ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷ ಜಯುಮಾರ್ ಬೆಳ್ಕಳೆ ಉಪಸ್ಥಿತರಿದ್ದರು.

ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಸ್ವಾಗತಿಸಿದರು. ಡಾ. ದುಗ್ಗಪ್ಪ ಕಜೆಕಾರ್, ಪ್ರೊ. ಪ್ರಸಾದ್ ರಾವ್ ಎಂ., ಪ್ರೊ.ರಾಘವ ನಾಯ್ಕ ಫಲಾನುವಿಗಳಹೆಸರುಗಳನ್ನುಓದಿದರು.ರಾಜ್ಯಶಾಸ್ತ್ರವಿಾಗ ಮುಖ್ಯಸ್ಥ ಪ್ರೊ. ಮಂಜುನಾಥ ವಂದಿಸಿದರು. ಡಾ. ಜಯಪ್ರಕಾಶ್ ಶೆಟ್ಟಿ ಹೆಚ್ ಕಾರ್ಯಕ್ರಮ ನಿರೂಪಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)