ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಉಡುಪಿ, ಜ.13: ಐಐಐಟಿಎಸ್, ಎನ್ಐಟಿಎಸ್,ಐಐಎಸ್ಇಆರ್ಎಸ್, ಎಐಐಎಂಎಸ್, ಎನ್ಎಲ್ಯು, ಐಎಸ್ಎಂ, ಐಐಪಿ, ಐಎಸ್ಐ, ಜೆಐಪಿಎಂಇಆರ್, ಎಸ್ಪಿಎ ಮುಂತಾದ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಹಿಂದುಳಿದ ವರ್ಗಗಳ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ ಹಾಗೂ ಸಾಮಾನ್ಯ ವರ್ಗದ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ವುೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಜ. 20ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಇಲಾಖೆ ವೆಬ್ಸೈಟ್ ಹಾಗೂ ದೂರವಾಣಿ: 080-65970004 ಅಥವಾ 0820-2573881ನ್ನು ಸಂಪರ್ಕಿಸಬಹುದು ಎಂದು ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟನೆ ತಿಳಿಸಿದೆ.
Next Story