varthabharthi

ಕರಾವಳಿ

ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ವಾರ್ತಾ ಭಾರತಿ : 13 Jan, 2018
Varthabharathi

 ಉಡುಪಿ, ಜ.13: 2017ನೇ ಸಾಲಿನಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ/ವೃತ್ತಿ ಪರ ಸ್ನಾತಕೋತ್ತರ ಪದವಿಯನ್ನು ಪೂರ್ಣ ಗೊಳಿಸಿದ್ದು, ಸರಾಸರಿ ಶೇ.70 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜ.20 ಕೊನೆಯ ದಿನವಾಗಿದೆ.

 ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್‌ಸೈಟ್‌ನ್ನು ನೋಡಬಹುದಾಗಿದೆ. ಅನುದಾನ ಲಭ್ಯತೆಗೆ ಅನುಗುಣವಾಗಿ ಮೆರಿಟ್ ಮತ್ತು ಮೀಸಲಾತಿ ಅನ್ವಯ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಮಾಹಿತಿಗಳಿಗಾಗಿ ದೂರವಾಣಿ ಸಂಖ್ಯೆ-080-65970004 ಹಾಗೂ 0820-2573881ನ್ನು ಸಂಪರ್ಕಿಸ ಬಹುದು ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.

 

Comments (Click here to Expand)