varthabharthi

ಕರಾವಳಿ

ಉಡುಪಿ: ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ

ವಾರ್ತಾ ಭಾರತಿ : 13 Jan, 2018
Varthabharathi

ಉಡುಪಿ, ಜ.13: ರಾಜ್ಯದಲ್ಲಿ ಸಿಗರೇಟು, ಬೀಡಿ, ಜಗಿಯುವ ತಂಬಾಕು ಉತ್ಪನ್ನಗಳಾದ (ಕಡ್ಡಿಪುಡಿ) ಇವುಗಳನ್ನು ಬಿಡಿ ಬಿಡಿಯಾಗಿ ಮಾರಾಟ ಮಾಡುತ್ತಿರುವುದು ಸರಕಾರದ ಗಮನಕ್ಕೆ ಬಂದಿದ್ದು, ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಕಾಯ್ದೆ (ಜಾಹೀರಾತು ನಿಷೇಧ ಹಾಗೂ ವ್ಯಾಪಾರ ವಾಣಿಜ್ಯ ಉತ್ಪಾದನೆ ಸರಬರಾಜು ಮತ್ತು ವಿತರಣೆ ನಿಬಂಧನೆ) ಕಾಯ್ದೆ-2003ರ ಉಲ್ಲಂಘನೆಯಾಗಿದೆ.

ಸಿಗರೇಟು, ಬೀಡಿ ಹಾಗೂ ಜಗಿಯುವ ತಂಬಾಕು ಉತ್ಪನ್ನಗಳಾದ(ಕಡ್ಡಿಪುಡಿ) ಇವುಗಳನ್ನು ಬಿಡಿ ಬಿಡಿಯಾಗಿ ಮಾರಾಟ ಮಾಡುವುದನ್ನು ರಾಜ್ಯದಲ್ಲಿ 2017ರ ಸೆ.11ರಂದು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿ ಸಿದವರಿಗೆ ಕೋಟ್ಪಾ-2003 ಕಾಯ್ದೆಯಂತೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ ದಂಡವನ್ನು ಸಹ ವಿಧಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.

 

Comments (Click here to Expand)