varthabharthi

ಕರ್ನಾಟಕ

ಚಿಕ್ಕಮಗಳೂರು: ಈಜಲು ತೆರಳಿದ್ದ ವಿದ್ಯಾರ್ಥಿ ನೀರು ಪಾಲು

ವಾರ್ತಾ ಭಾರತಿ : 13 Jan, 2018
Varthabharathi

ಚಿಕ್ಕಮಗಳೂರು, ಜ.13: ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಚಿಕ್ಕಮಗಳೂರು ನಗರದ ಐಡಿಎಸ್‌ಜಿ ಕಾಲೇಜಿನ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.

ಸುಖೇಶ್ (21) ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ವಿದ್ಯಾರ್ಥಿಯಾಗಿದ್ದಾರೆ. ಮೃತ ವಿದ್ಯಾರ್ಥಿ ಕಾಲೇಜ್ ಮುಗಿಸಿ ಐವರು ಸ್ನೇಹಿತರೊಂದಿಗೆ ಜಿಲ್ಲೆಯ ಖಾಂಡ್ಯ ಗ್ರಾಮದ ತೂಗು ಸೇತುವೆ ಬಳಿ ಭದ್ರಾ ನದಿಯಲ್ಲಿ ಈ ಘಟನೆ ನಡೆದಿದೆ.ವಿದ್ಯಾರ್ಥಿ ಶವಕ್ಕಾಗಿ ಗ್ರಾಮಸ್ಥರು ಮತ್ತು ಪೊಲೀಸರು ನದಿಯಲ್ಲಿ ವ್ಯಾಪಕ ಹುಡುಕಾಟ ನಡೆಸಿದ್ದಾರೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

 

Comments (Click here to Expand)