varthabharthi

ಕರಾವಳಿ

ಮಣಿಪಾಲ: ರೈಲಿನಡಿಗೆ ಬಿದ್ದು ಪ್ರೇಮಿಗಳ ಆತ್ಮಹತ್ಯೆ

ವಾರ್ತಾ ಭಾರತಿ : 13 Jan, 2018
Varthabharathi

ಮಣಿಪಾಲ, ಜ.13: ಪ್ರೇಮಿಗಳಿಬ್ಬರು ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.12ರಂದು ರಾತ್ರಿ 8:30ರ ಸುಮಾರಿಗೆ ಇಂದ್ರಾಳಿ ರೈಲ್ವೆ ಸೇತುವೆ ಸಮೀಪ ನಡೆದಿದೆ.

ಮೃತರನ್ನು ಚಿಕ್ಕಮಗಳೂರು ಜಿಲ್ಲೆಯ ಕೈಮರ ನಿವಾಸಿ ಸುರೇಶ (27) ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಗೀತಾ (25) ಎಂದು ಗುರುತಿಸಲಾ ಗಿದೆ.

ಪರಸ್ಪರ ಪ್ರೀತಿಸುತ್ತಿದ್ದ ಇವರು ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

 

Comments (Click here to Expand)