ಸುಕನ್ಯ
ನಂಜನಗೂಡು,ಜ.15: ನಗರದ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿ, ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಉದ್ಯೋಗಿ ನೇರಳೆ ಕೆ.ಸುರೇಶ್ ಅವರ ಪತ್ನಿ ಸುಕನ್ಯ(58) ಸೋಮವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು.
ಕಳೆದ ಒಂದು ತಿಂಗಳಿನಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೇತರಿಸಿಕೊಂಡಿದ್ದ ಅವರನ್ನು ಇತ್ತೀಚೆಗಷ್ಟೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಇಂದು ಸಂಜೆ ಉಸಿರಾಟದ ತೊಂದರೆ ಹೆಚ್ಚಾದ ಕಾರಣ ಅವರು ಅಸುನೀಗಿದರು.
ಮೃತರು ವಾರ್ತಾಭಾರತಿ ಮೈಸೂರು ಜಿಲ್ಲಾ ವರದಿಗಾರ ಸತೀಶ್ಕುಮಾರ್ ಎನ್.ಎಸ್. ಸೇರಿದಂತೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯನ್ನು ಅವರ ಸ್ವಗ್ರಾಮ ನೇರಳೆ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಅವರ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
Next Story