ಹಾಜಿ ಸೂಫಿ ಬ್ಯಾರಿ
ಚಿಕ್ಕಮಗಳೂರು, ಜ.31: ಹಿರಿಯ ಕಾಂಗ್ರೆಸ್ ಮುಖಂಡ ಹಾಜಿ ಸೂಫಿ ಬ್ಯಾರಿ(90) ಮಂಗಳವಾರ ರಾತ್ರಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು.
ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ನಲ್ಲಿ ಹಲವು ವರ್ಷಗಳ ಕಾಲ ಸಕ್ರೀಯ ಕಾರ್ಯಕರ್ತರಾಗಿ ಪಕ್ಷದ ವಿವಿಧ ಹುದೆಗಳಲ್ಲಿ ದುಡಿದಿದ್ದರು. ಅವರು ಪತ್ನಿ ಮತ್ತು ಜಿಲ್ಲಾ ಬ್ಯಾರಿಗಳ ಒಕ್ಕೂಟದ ಜಿಲ್ಲಾ ಉಪಾಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಬಿ.ಎಸ್.ಮಹಮ್ಮದ್ ಸಹಿತ 11 ಮಕ್ಕಳನ್ನು ಮತ್ತು ಮೊಮ್ಮೊಕ್ಕಳನ್ನು ಅಗಲಿದ್ದಾರೆ.
ಅವರ ನಿಧನಕ್ಕೆ ಶಾಸಕ ಬಿ.ಬಿ.ನಿಂಗಯ್ಯ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಎಚ್.ದೇವರಾಜ್, ಕರ್ನಾಟಕ ಬ್ಯಾರಿ ಅಕಾಡೆಮಿ ಅಧ್ಯಕ್ಷ ಕೆ.ಮುಹಮ್ಮದ್, ಮಾಜಿ ಸದಸ್ಯ ಕಿರುಗುಂದ ಅಬ್ಬಾಸ್, ಜಿಲ್ಲಾ ಬ್ಯಾರಿಗಳ ಒಕ್ಕೂಟದ ಅಧ್ಯಕ್ಷ ಸಿ.ಕೆ.ಇಬ್ರಾಹೀಂ, ಮಾಜಿ ನಗರಸಭೆ ಸದಸ್ಯ ಬಿ.ಎಚ್.ಮುಹಮ್ಮದ್ ಸಂತಾಪ ಸೂಚಿಸಿದ್ದಾರೆ.
Next Story