varthabharthi

ಅಂತಾರಾಷ್ಟ್ರೀಯ

ಈ ವಾರ ಇರಾನ್ ಅಧ್ಯಕ್ಷ ಹಸನ್ ರೂಹಾನಿ ಭಾರತಕ್ಕೆ

ವಾರ್ತಾ ಭಾರತಿ : 12 Feb, 2018

ಟೆಹರಾನ್ (ಇರಾನ್), ಫೆ. 12: ಇರಾನ್ ಅಧ್ಯಕ್ಷ ಹಸನ್ ರೂಹಾನಿ ಈ ವಾರ ಭಾರತಕ್ಕೆ ಮೂರು ದಿನಗಳ ಭೇಟಿ ನೀಡಲಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ಸೋಮವಾರ ವರದಿ ಮಾಡಿವೆ.

ಇತ್ತೀಚಿನ ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಬಗ್ಗೆ ಮಾತನಾಡುವುದಕ್ಕಾಗಿ ರೂಹಾನಿ ಗುರುವಾರ ಭಾರತಕ್ಕೆ ಆಗಮಿಸಲಿದ್ದಾರೆ ಎಂದು ‘ಇಸ್ನಾ’ ಸುದ್ದಿ ಸಂಸ್ಥೆ ತಿಳಿಸಿದೆ.

ಅವರನ್ನು ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಭಾರತಕ್ಕೆ ಆಹ್ವಾನಿಸಿದ್ದರು.

ಇರಾನ್‌ನ ಚಬಹಾರ್ ಬಂದರು ಸೇರಿದಂತೆ ಹಲವಾರು ಯೋಜನೆಗಳಲ್ಲಿ ಭಾರತ ಮತ್ತು ಇರಾನ್‌ಗಳು ಸಹಯೋಗ ಹೊಂದಿವೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)