varthabharthi

ಕರ್ನಾಟಕ

ಪ್ರವಾಸಕ್ಕೆಂದು ಬಂದ ಇಬ್ಬರು ವಿದ್ಯಾರ್ಥಿಗಳು ಕೆರೆಗೆ ಬಿದ್ದು ಮೃತ್ಯು

ವಾರ್ತಾ ಭಾರತಿ : 13 Feb, 2018

ತು‌ಮಕೂರು,ಫೆ.13: ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರಿನ ವಾಸವಿ ವಿದ್ಯಾಪೀಠ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಕೊರಟಗೆರೆ ತಾಲೂಕಿನ ಎಲೆರಾಂಪುರ ಗ್ರಾಮದ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ನಂತರ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿಗಳನ್ನು ಹರೀಶ್ (21) ಮತ್ತು ನಿಖಿಲ್ (22) ಎಂದು ಗುರುತಿಸಲಾಗಿದೆ.

ಘಟನೆಯೆ ಹಿನ್ನೆಲೆ: ಬೆಂಗಳೂರಿನ ವಿಜಯನಗರದ ವಾಸವಿ ವಿದ್ಯಾಪೀಠ ಕಾಲೇಜಿನ 12 ವಿದ್ಯಾರ್ಥಿಗಳು ದೇವರಾಯನದುರ್ಗಕ್ಕೆ ಪ್ರವಾಸಕ್ಕೆಂದು ಬಂದಿದ್ದು, ಈ ವೇಳೆ ಸಮೀಪದ ಎಲೆರಾಂಪುರ ಕೆರೆಗೆ ಈಜಲು ಹೋಗಿದ್ದಾರೆ. ಆದರೆ ಈಜಲು ಬಾರದ ಹರೀಶ್ ಮತ್ತು ನಿಖಿಲ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)